Misc

ಕನ್ನಡ ವಚನಗಳು

Vachanagalu Kannada Lyrics

MiscStotram (स्तोत्र संग्रह)ಕನ್ನಡ
Share This

Join HinduNidhi WhatsApp Channel

Stay updated with the latest Hindu Text, updates, and exclusive content. Join our WhatsApp channel now!

Join Now

|| Vachanagalu Kannada ||

ಅಂಗ ಅಂಗನೆಯ ರೂಪಲ್ಲದೆ,
ಮನ ವಸ್ತುಭಾವದಲ್ಲಿ ಬೆಚ್ಚಂತಿಪ್ಪುದು.
ಬಂದ ಕಥನದಲ್ಲಿ ಬಂದು ಹಿಂಗಿದೆಯಲ್ಲಾ ಅಕ್ಕಾ!
ಗುಹೇಶ್ವರಲಿಂಗದಲ್ಲಿ ಉಭಯನಾಮವಳಿದೆ ಎನ್ನಕಾ

ಅಂಗ ಅನಂಗವೆಂಬೆರಡೂ ಅಳಿದು ನಿಜದಲ್ಲಿ ನಿಂದ ಲಿಂಗೈಕ್ಯನ
ಅಂಗದಲುಳ್ಳ ಕ್ರೀಗಳೆಲ್ಲವೂ ಲಿಂಗಕ್ರೀಗಳು ನೋಡಾ.
ಮನೋಲಯವಾಗಿಪ್ಪ ಲಿಂಗೈಕ್ಯನ ಅನುಭಾವವೆಲ್ಲವೂ
ಜ್ಞಾನದಷ್ಟ ಶಬ್ದ ನೋಡಾ. ಳ
ತನ್ನಲ್ಲಿ ತಾನು ತದ್ಗತವಾಗಿಪ್ಪ ಶಿವಯೋಗಿಗೆ
ಬಿನ್ನವಿಲ್ಲ ನೋಡಾ- ಗುಹೇಶ್ವರ ಸಾಕ್ಷಿಯಾಗಿ

ಅಂಗ ಉಳ್ಳನ್ನಬರ ಲಿಂಗಪೂಜೆಯ ಬೇಕು.
ಲಿಂಗವೆಂಬ ಮೂರ್ತಿ ಉಳ್ಳನ್ನಬರ ಸಂದಿಲ್ಲದೆ ಅರ್ಪಿಸಬೇಕು.
ಅಂಗವಳಿದ ಮತ್ತೆ ಲಿಂಗವೆಂಬ ಭಾವ ಹಿಂಗದಿರಬೇಕು.
ಅದು ಗುಹೇಶ್ವರಲಿಂಗದ ಇರವು ಚಂದಯ್ಯಾ.

ಅಂಗ ಮೂವತ್ತಾರರ ಮೇಲೆ ಲಿಂಗ.
ನಿಸ್ಸಂಗವೆಂಬ ಕರದಲ್ಲಿ ಹಿಡಿದು ಅಂಗವಿಸಿ,
ಅಹುದು ಆಗದು ಎಂಬ ನಿಸ್ಸಂಗದ ಅರ್ಪಣವ ಮಾಡಿ
ಸುಸಂಗ ಪ್ರಸಾದವ ಕೊಳಬಲ್ಲವಂಗೆ
ಗುಹೇಶ್ವರಾ, ಮುಂದೆ ಬಯಲು ಬಯಲು ಬಟ್ಟ ಬಯಲು

ಅಂಗ ಲಿಂಗದಲ್ಲಿ ತರಹರಾಗಿ, ಸಮತೆ ಶಾಂತಿಯಲ್ಲಿ ತರಹರಾಗಿ,
ಮನ ಜ್ಞಾನದಲ್ಲಿ ತರಹರಾಗಿ, ಭಾವ ನಿರ್ಭಾವದಲ್ಲಿ ತರಹರಿಯಾಗಿ ಇರಬಲ್ಲಡೆ,
ಆತನೆ ಅಚ್ಚಶರಣನು ಕಾಣಾ guಹೇಶ್ವರಾ.

ಅಂಗಕ್ಕೆ ಆಚಾರವಾಗಿ ಕಳೆಗಳುಳ್ಳನ್ನಕ್ಕ
ಸಕಲ ಪದಾರ್ಥವ ಲಿಂಗಕ್ಕೆ ಕೊಟ್ಟಲ್ಲದೆ ಕೊಳಲಾಗದು.
ಲಿಂಗವ ಬಿಟ್ಟು ಕಳೆ ಹಿಂಗಿದ ಬಳಿಕ ಅಂಗವೇನು ಬಲ್ಲುದೊ?
ಕಪ್ಪಡಿಯ ಸಂಗಮನಾಥನಲ್ಲಿ ಐಕ್ಯವಾದಂದಿಂಗೆ ನಿಜವ ಮರೆ.
ಗುಹೇಶ್ವರಲಿಂಗ ಸಾಕ್ಷಿಯಾಗಿ,
ಸಂಗನಬಸವಣ್ಣಾ ಅರ್ಪಿತವಿಲ್ಲದೆ ಕೊಳದಿರು ಅನರ್ಪಿತವ.

ಅಂಗಕ್ಕೆಂದಡೆ ಹಿರಿಯ ಹರಿವಾಣವ ತುಂಬಿ ಬೋನವ ತಾ ಎಂಬರು.
ಲಿಂಗಕ್ಕೆಂದಡೆ ಚಿಕ್ಕ ಗಿಣ್ಣಿಲು ತುಂಬಿ ಬೋನವ ತಾ ಎಂಬರು.
ಅಂಗವ ಹಿರಿದು ಮಾಡುವ ಲಿಂಗವ ಕಿರಿದು ಮಾಡಲು
ಮನೆಯಲ್ಲಿ ಮಡಕೆ ತುಂಬಿ ಬೋನವ ಮಾಡಲು,
ಚಿಕ್ಕ ಕುಡಿಕೆ ಗಿಣ್ಣಿಲು ಲಿಂಗಕ್ಕೆ ಬೋನವ ಹಿಡಿವ
ಈ ಮಡಕೆಮಾರಿಗಳನೇನೆಂಬೆ ಗುಹೇಶ್ವರಾ.

ಅಂಗಜಂಗುಳಿಗಳೆಲ್ಲಾ ಅಶನಕ್ಕೆ ನೆರೆದರು.
ಲಿಂಗದ ಹವಣನಿವರೆತ್ತ ಬಲ್ಲರು?
ಕಾಯಜೀವಿಗಳು ಕಳವಳಧಾರಿಗಳು,
ದೇವರ ಸುದ್ದಿಯನಿವರೆತ್ತ ಬಲ್ಲರು?
ಮದ್ಯಪಾನವನುಂಡು ಮದವೆದ್ದ ಜೋಗಿಯಂತೆ ನುಡಿವರು.
ಗುಹೇಶ್ವರನ ನಿಲವನಿವರೆತ್ತ ಬಲ್ಲರು.

ಅಂಗಜೀವಿಗಳೆಲ್ಲಾ ಅಶನಕ್ಕೆ ನೆರೆದು, ಲಿಂಗವಾರ್ತೆಯ ನುಡಿವರಯ್ಯಾ.
ಕಾಯಜೀವಿಗಳೆಲ್ಲಾ ಕಳವಳಿಸಿ ನುಡಿವರಯ್ಯಾ.
ಮನಬಂದ ಪರಿಯಲ್ಲಿ ನುಡಿವಿರಿ,
ಗುಹೇಶ್ವರಲಿಂಗ ನಿಮಗೆಲ್ಲಿಯದೊ?

ಅಂಗದ ಕಲೆ ಲಿಂಗದಲ್ಲಿ ಅರತ ಬಳಿಕ,
ಅಂಗವೆಂಬ ಶಂಕೆಯಿಲ್ಲ ನೋಡಾ ಶರಣಂಗೆ.
ಪ್ರಾಣದ ಕಲೆ ಅರಿವಿನಲ್ಲಿ ಅರತ ಬಳಿಕ,
ಶಬ್ದಸಂದಣಿಗೆ ಹಂಗಿಲ್ಲ ನೋಡಾ.
ಶರಣ ನಡೆದಡೆ ನಿರ್ಗಮನಿ ನುಡಿದಡೆ ನಿಶ್ಶಬ್ದಿ!
ಗುಹೇಶ್ವರನ ಶರಣಂಗೆ ಕುರುಹಿಲ್ಲ ಕೇಳಾ ಎಲೆ ಅವ್ವಾ.

Found a Mistake or Error? Report it Now

Download ಕನ್ನಡ ವಚನಗಳು PDF

ಕನ್ನಡ ವಚನಗಳು PDF

Leave a Comment

Join WhatsApp Channel Download App